ಒಟ್ಟು 8 ಕಡೆಗಳಲ್ಲಿ , 1 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನ್ನದೇವರ ಮುಂದೆ | ಇನ್ನು ದೇವರು ಉಂಟೆ | ಅನ್ನವಿರುವನಕ ಪ್ರಾಣವೀ ಜಗದೊಳಗೆ | ಅನ್ನದೈವ ಸರ್ವಜ್ಞ ||
--------------
ಸರ್ವಜ್ಞ
ಅವರೆಂದರವನು ತಾ | ನವರಂತೆ ಆಗುವನು | ಅವರೆನ್ನದವನು ಜಗದೊಳಗೆ ಬೆಂದಿರ್ದ | ಅವರೆಯಂತಕ್ಕು ಸರ್ವಜ್ಞ ||
--------------
ಸರ್ವಜ್ಞ
ಐವರಟ್ಟಾಸವನ | ಯೌವನದ ಹಿಂಡನ್ನು | ಹೊಯ್ಯುತ್ತ ವಶಕ್ಕೆ ತಂದಾತ ಜಗದೊಳಗೆ | ದೈವ ತಾನಕ್ಕು ಸರ್ವಜ್ಞ ||
--------------
ಸರ್ವಜ್ಞ
ಜೀವ ಜೀವವ ತಿಂದು | ಜೀವಿಗಳ ಹುಟ್ಟಿಸಿರೆ | ಸಾವು ಎಲ್ಲಿಹುದು ಸ್ವಾರ್ಥವೆ ಜಗದೊಳಗೆ | ಸಾವೆಂದು ತಿಳಿಯೋ ಸರ್ವಜ್ಞ ||
--------------
ಸರ್ವಜ್ಞ
ಜ್ಞಾನದಿಂ ಮೇಲಿಲ್ಲ | ಶ್ವಾನನಿಂ ಕೀಳಿಲ್ಲ | ಭಾನು ಮಂಡಲದಿಂ ಬೆಳಗಿಲ್ಲ ಜಗದೊಳಗೆ | ಜ್ಞಾನವೇ ಮೇಲು ಸರ್ವಜ್ಞ ||
--------------
ಸರ್ವಜ್ಞ
ಮಾತನರಿದಾ ಸುತನು | ರೀತಿಯರಿದಾ ಸತಿಯು | ನೀತಿಯನು ಅರಿತ ವಿಪ್ರತಾ ಜಗದೊಳಗೆ | ಜ್ಯೋತಿಯಿದ್ದಂತೆ ಸರ್ವಜ್ಞ ||
--------------
ಸರ್ವಜ್ಞ
ರಾಮನಾಮವೆ ನಾಮ | ಸೋಮ ಶಂಕರ ಗುರುವು ಆ ಮಹಾರುದ್ರ ಅಧಿದೈವ ಜಗದೊಳಗೆ | ಭೀಮನೇ ಭಕ್ತ ಸರ್ವಜ್ಞ ||
--------------
ಸರ್ವಜ್ಞ
ಹರನಾವ ಕರೆಯದಲೆ | ಪರಿಶಿವನ ನೆನೆಯದಲೆ | ಸ್ಮರಹರನ ಕರುಣವಿಲ್ಲದೆಯೆ ಜಗದೊಳಗೆ ಇರುವದೇ ಕಷ್ಟ ಸರ್ವಜ್ಞ ||
--------------
ಸರ್ವಜ್ಞ